ಆತ್ಮವಿಶ್ವಾಸವಿದ್ದರೆ ಯಶಸ್ಸು ಸಾಧ್ಯ: ಪ್ರೊ.ಆನಂದ ದೇಶಪಾಂಡೆ

ಜಮಖಂಡಿ: ಸತತ ಪರಿಶ್ರಮವೇ ಯಶಸ್ಸಿನ ಮೂಲ. ಈ ಭೂಮಿಯ ಮೇಲೆ ಅಸಾಧ್ಯವಾದುದು ಯಾವುದು ಇಲ್ಲ. ನಿರಂತರ ಅಧ್ಯಯನ ಮತ್ತು ಆತ್ಮವಿಶ್ವಾಸವಿದ್ದರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ಬಾಗಲಕೋಟ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಆನಂದ ದೇಶಪಾಂಡೆ ಹೇಳಿದರು.
ನಗರದ ಬಿಎಲ್‌ಡಿಇ ಸಂಸ್ಥೆಯ ವಾಣಿಜ್ಯ, ಬಿಎಚ್‌ಎಸ್ ಕಲೆ ಮತ್ತು ಟಿಜಿಪಿ ವಿಜ್ಞಾನ ಮಹಾವಿದ್ಯಾಲಯದ ೨೦೨೫-೨೬ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಒಕ್ಕೂಟ ಮತ್ತು ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಸತತ ಪ್ರಯತ್ನ, ಸ್ಪಷ್ಟ ಗುರಿ, ಆತ್ಮವಿಶ್ವಾಸ ಮತ್ತು ಛಲದೊಂದಿದೆ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಿ. ವಿದ್ಯಾರ್ಥಿ ಜೀವನ ಅತ್ಯಂತ ಮಹತ್ವದ್ದು. ಇಂದಿನ ಎಐ ಯುಗದಲ್ಲಿ ಕೌಶಲ್ಯಕ್ಕೆ ಹೆಚ್ಚಿನ ಮಹತ್ವ ನೀಡಿ. ಆಧುನಿಕ ತಂತ್ರಜ್ಞಾನ ಬಳಕೆಯೊಂದಿಗೆ ಕಠಿಣ ಪರಿಶ್ರಮಪಟ್ಟರೆ ಯಶಸ್ಸು ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಸಂಸ್ಥೆಯ ಆಡಳಿತಾಧಿಕಾರಿ ಪ್ರೊ.ಎಸ್.ಎಚ್.ಲಗಳಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಅತೀ ಹೆಚ್ಚು ದತ್ತಿನಿಧಿಗಳನ್ನೊಳಗೊಂಡ ಕಾಲೇಜು ನಮ್ಮದೆಂದು ಹೇಳಲು ಹೆಮ್ಮೆ ಎನಿಸುತ್ತದೆ. ವಿದ್ಯಾರ್ಥಿಗಳ ಸರ್ವತ್ತೋಮುಖ ಅಭಿವೃದ್ಧಿಗಾಗಿ ಎಲ್ಲ ರೀತಿಯ ಸೌಲಭ್ಯ ಒದಗಿಸಲು ಸಿದ್ಧರಿದ್ದೇವೆ. ವಿದ್ಯಾರ್ಥಿಗಳು ನಿಶ್ಚಿತ ಗುರಿಯೊಂದಿಗೆ ಸತತ ಪ್ರಯತ್ನ ಮಾಡಿದಾಗ ಮಾತ್ರ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದರು.
ಕಾಲೇಜಿನ ಪ್ರಾಚಾರ್ಯ ಡಾ.ಪಿ.ಡಿ.ಪೋಳ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿ ಒಕ್ಕೂಟದ ಕಾರ್ಯಧ್ಯಕ್ಷ ಡಾ.ರವಿಶಂಕರ ಬಿ.ಎಸ್. ಹಾಗೂ ದೈಹಿಕ ನಿದೇರ್ಶಕ ಡಾ.ಕೆ.ಎಂ.ಶಿರಹಟ್ಟಿ ವರದಿ ವಾಚನ ಮಾಡಿದರು.

ಇದೇ ವೇಳೆ ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ವಿದ್ಯಾರ್ಥಿಗಳೇ ಸಿದ್ಧಪಡಿಸಿದ ಜಮಖಂಡಿ “ಬಿಎಲ್‌ಡಿಇ ದರ್ಪಣ” ಪ್ರಾಯೋಗಿಕ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು. ದತ್ತಿಗಳು ನೀಡಿದ ಒಟ್ಟು ೫೬ ದತ್ತಿನಿಧಿಗಳನ್ನು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಹಸ್ತಾಂತರಿಸಲಾಯಿತು.

ಈ ವೇಳೆ ಉಪಪ್ರಾಚಾರ್ಯ ಡಾ.ಡಿ.ಎಸ್.ನಿಟ್ಟೂರ, ಡಾ.ಬಿ.ಎಂ.ನುಚ್ಚಿ, ಡಾ.ಎಸ್.ಎಸ್.ಸುವರ್ಣಖಂಡಿ, ಪ್ರೊ.ಎ.ಬಿ.ಖೋತ, ಎನ್.ಎಸ್.ಕಾಖಂಡಕಿ ಸೇರಿದಂತೆ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಪ್ರೊ.ಶ್ರೀನಿವಾಸ ಕಟ್ಟಿಮನಿ ಹಾಗೂ ಪ್ರೊ.ಎಸ್.ಪಿ.ಗದ್ಯಾಳ ನಿರೂಪಿಸಿದರು. ಪ್ರೊ.ಮಲ್ಲಿಕಾರ್ಜುನ ಬಿ ವಂದಿಸಿದರು.

7tv Karnataka
पत्रकार बंधु भारत के किसी भी क्षेत्र से जुड़ने के लिए सम्पर्क करें